HomeIndiaಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪತ್ನಿ, ಮಕ್ಕಳನ್ನು ಕೊಚ್ಚಿ ಕೊಂದು ಮನೆಯಲ್ಲೇ ಹೂತು...

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪತ್ನಿ, ಮಕ್ಕಳನ್ನು ಕೊಚ್ಚಿ ಕೊಂದು ಮನೆಯಲ್ಲೇ ಹೂತು ಹಾಕಿದ್ದ ಕಿರಾತಕ ಅರೆಸ್ಟ್

ಭೋಪಾಲ್: ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಪತ್ನಿ, ಮಕ್ಕಳನ್ನು ಕೊಲೆ ಮಾಡಿ ಮನೆಯಲ್ಲೇ ಹೂತು ಹಾಕಿದ್ದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ರತ್ಲಾಮ್‌ ನ ದೀದಿನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಲೆ ಮಾಡಿ ತನ್ನ ಮನೆಯಲ್ಲಿ ಹೂತು ಹಾಕಿದ್ದಾನೆ. ಆರೋಪಿ 33-34 ವರ್ಷ ವಯಸ್ಸಿನವನಾಗಿದ್ದು, ರೈಲ್ವೇಯಲ್ಲಿ ಗ್ಯಾಂಗ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾನೆ: ರತ್ಲಾಮ್ ಎಸ್.ಪಿ. ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಾಪತ್ತೆಯಾಗಿರುವ ಪತ್ನಿ ಮತ್ತು ಮಕ್ಕಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕೊಲೆಗೆ ವೈಯಕ್ತಿಕ ವಿವಾದವೇ ಕಾರಣ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್.ಪಿ. ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular