HomeIndiaBREAKING NEWS: ಬಿಜೆಪಿ ಏಕಾಂಗಿಯಾಗಿ 370, NDAಗೆ 400 ಕ್ಕೂ ಅಧಿಕ ಸ್ಥಾನ: ಪ್ರಧಾನಿ ಮೋದಿ

BREAKING NEWS: ಬಿಜೆಪಿ ಏಕಾಂಗಿಯಾಗಿ 370, NDAಗೆ 400 ಕ್ಕೂ ಅಧಿಕ ಸ್ಥಾನ: ಪ್ರಧಾನಿ ಮೋದಿ

ಭೋಪಾಲ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳನ್ನು ದಾಟಲಿದೆ. ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಪ್ರದೇಶದ ಝಬುವಾದಲ್ಲಿ ಸಾರ್ವಜನಿಕ ಭಾಷಣದ ವೇಳೆ ಮಾತನಾಡಿದ ಅವರು, ಜನರಿಗಾಗಿ ನಾನು ಹಗಲು ರಾತ್ರಿ ಕೆಲಸ ಮಾಡುತ್ತೇನೆ. ಮಧ್ಯಪ್ರದೇಶದ ಜನ ಈ ಬಾರಿ ಬೆಂಬಲ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋಲಲಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿ 370 ಸ್ಥಾನಗಳನ್ನು ದಾಟಲಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷವು 370 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲು ಸಜ್ಜಾಗಿದೆ. ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular