HomeIndiaBREAKING NEWS: ಶಿವರಾಜ್ ಸಿಂಗ್ ಚೌಹಾಣ್ ಗೆ ಬಿಗ್ ಶಾಕ್; ಮಧ್ಯಪ್ರದೇಶ ನೂತನ ಸಿಎಂ ಆಗಿ...

BREAKING NEWS: ಶಿವರಾಜ್ ಸಿಂಗ್ ಚೌಹಾಣ್ ಗೆ ಬಿಗ್ ಶಾಕ್; ಮಧ್ಯಪ್ರದೇಶ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಆಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಗೆ ಬಿಗ್ ಶಾಕ್ ನೀಡಿರುವ ಬಿಜೆಪಿ, ನೂತನ ಮುಖ್ಯಮಂತ್ರಿಯನ್ನಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದೆ.

ಭೋಪಾಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಯಿತು. ನೂತನ ಸಿಎಂ ಆಗಿ ಮೋಹನ್ ಯಾದವ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಮೋಹನ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಛತ್ತೀಸ್ ಗಢದಂತೆ ಮಧ್ಯಪ್ರದೇಶ ಬಿಜೆಪಿ ಸರ್ಕಾರದಲ್ಲಿಯೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲಾಗಿದೆ. ಡಿಸಿಎಂ ಆಗಿ ಜಗದೀಶ್ ದೇವಡಾ ಹಾಗೂ ರಾಜೇಶ್ ಶುಕ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಪೀಕರ್ ಆಗಿ ನರೇಂದ್ರ ಸಿಂಗ್ ಥೋಮರ್ ಅವರನ್ನು ಆಯ್ಕೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular