ಭೋಪಾಲ್: ಕಳಶ ಯಾತ್ರೆಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯಾರ್ ನಲ್ಲಿ ನಡೆದಿದೆ.
ಗ್ವಾಲಿಯಾರ್ ನಲ್ಲಿ ನಡೆದ ಕಳಶ ಯಾತ್ರೆ ವೇಳೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿದ್ದು, ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಭಕ್ತ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

