ಭೋಪಾಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಆಸ್ಪತ್ರೆಯ ಸಿಬ್ಬಂದಿ ಎಚ್ಚೆತ್ತುಕೊಂಡು ಬೆಂಕಿ ನಂದಿಸಿದ್ದಾರೆ.
ಆಸ್ಪತ್ರೆಯ ಅಡುಗೆ ಮನೆಯ ಪ್ರದೇಶದ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘತನೆ ನಡೆದಿದೆ. ಕೂಡಲೇ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಹಿಳಾ ಮತ್ತು ಮಕ್ಕಳ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ತ್ವರಿತ ಕ್ರಮ ಕೈಗೊಂಡಿದ್ದರಿಂದ ಪರಿಸ್ಥಿತಿ ಹತೋಟಿಗೆ ಬಂದಿದೆ. ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
