ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 31 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಅವರು ಜನವರಿ, 31 ರಂದು ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಕಾವೇರಿ ಹೈಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

ನಂತರ ಮಧ್ಯಾಹ್ನ 2.15 ಗಂಟೆಗೆ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಕಾವೇರಿ ಉಗಮಸ್ಥಾನ ಶ್ರೀಕ್ಷೇತ್ರ ತಲಕಾವೇರಿಗೆ ಭೇಟಿ ನೀಡಲಿದ್ದಾರೆ.

ನಂತರ ಮಧ್ಯಾಹ್ನ 3 ಗಂಟೆಗೆ ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ ಕೊಡಗು ಜಿಲ್ಲೆಯ ಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read