HomeKarnatakaಮಡಿಕೇರಿ : ಜೂನ್ 24 ರಂದು 'ಬಿಜಿಎಸ್' ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ

ಮಡಿಕೇರಿ : ಜೂನ್ 24 ರಂದು ‘ಬಿಜಿಎಸ್’ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ

ಮಡಿಕೇರಿ :   ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯೋಜಿಸುತ್ತಿರುವ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ರವರ ವತಿಯಿಂದ ಜೂನ್, 24 ರಂದು ಬೆಳಗ್ಗೆ 9 ಗಂಟೆಗೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಅಬ್ಬೂರು ಗ್ರಾಮದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳಕ್ಕೆ, ಮೈಸೂರಿನ ಹೆಸರಾಂತ ಕಂಪನಿಗಳಾದ ಇನ್ಫೋಸಿಸ್, ಜೆ.ಕೆ ಟೈರ್ಸ್, ಟಿ.ವಿ.ಎಸ್, ರಾಣೆ-ಮಡ್ರಾಸ್, ಟ್ರೈಟಾನ್ ವ್ಯಾಲ್ವ್ಸ್, ಆಟೋ ಮೋಟಿವ್ ಎಕ್ಸಲ್ಸ್, ಸುಪ್ರೀಮ್ ಫಾರ್ಮಾs ಸ್ಯುಟಿಕಲ್ಸ್ ಮುಂತಾದವು 60ಕ್ಕೂ ಹೆಚ್ಚು ಮೈಸೂರು-ಕೊಡಗಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಜೂನ್, 24 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ, ಎಸ್‍ಎಸ್‍ಎಲ್‍ಸಿ ಪಾಸು/ಫೇಲು, ಪಿಯುಸಿ, ಪದವಿ, ಐಟಿಐ, ಡಿಪ್ಲೋಮ, ಸ್ನಾತಕೋತ್ತರದಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್‍ಕಾರ್ಡ್, ಸ್ವ-ವಿವರವುಳ್ಳ 10 ಬಯೋಡೇಟಾ ಪ್ರತಿಗಳೊಂದಿಗೆ, ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ ದೂರವಾಣಿ ಸಂಖ್ಯೆ, 8296020826 ನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular