HomeKarnatakaಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, 12 ಮೊಬೈಲ್, 65,900 ರೂ.ನಗದು ವಶಕ್ಕೆ ಪಡೆಯಲಾಗಿದೆ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಸೇರಿ ಹಲವರ ಪರ್ಸ್ ಗಳನ್ನು ಆರೋಪಿಗಳು ಕಳವು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಯದುವೀರ್ ಪಾಲ್ಗೊಂಡಿದ್ದ ಸಮಾವೇಶದಲ್ಲಿ ನಾಯಕರು, ಮುಖಂಡರು, ಜನರ ಪರ್ಸ್ ಗಳನ್ನು ದೋಚಲಾಗಿತ್ತು. ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular