HomeJobsಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಮಡಿಕೇರಿ: ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಮಡಿಕೇರಿ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ 11 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 22 ಕೊನೆಯ ದಿನವಾಗಿದೆ. ಅರ್ಜಿಯನ್ನು ಮಡಿಕೇರಿ ನಗರಸಭೆಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಸಲ್ಲಿಸುವುದು. ನೇರ ಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗಧಿಪಡಿಸಿದ ವಯೋಮಿತಿ/ ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು ವಿಶೇಷ ಸೂಚನೆಗಳು ಹಾಗೂ ಇತರೆ ಅಗತ್ಯ ಮಾಹಿತಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್‍ಸೈಟ್ www.kodagu.dudc.mrc.gov.in  ಹಾಗೂ ಮಡಿಕೇರಿ ನಗರಸಭೆ www.madikericity.mrc.gov.in  ಅಧಿಕೃತ ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರ ಪಾವತಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಪೌರಕಾರ್ಮಿಕರ ನೇರ ನೇಮಕಾತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ: ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಮಡಿಕೇರಿ ನಗರಸಭೆಯಲ್ಲಿ ಖಾಲಿ ಇರುವ 04 ಪೌರ ಕಾರ್ಮಿಕರ ಹುದ್ದೆಯನ್ನು ನೇರ ನೇಮಕಾತಿ ಮಾಡಬೇಕಿದೆ.

ಹೊಸದಾಗಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕಾಗಿರುವುದರಿಂದ, ವರ್ಗವಾರು ವರ್ಗೀಕರಿಸಿ, ಸರ್ಕಾರದ ಆದೇಶದ ರೀತ್ಯಾ ನೇರ ನೇಮಕಾತಿ ಮಾಡುವ ಸಂಬಂಧ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 22 ಕೊನೆಯ ದಿನವಾಗಿದೆ. ಅರ್ಜಿಯನ್ನು ಮಡಿಕೇರಿ ನಗರಸಭೆಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಸಲ್ಲಿಸುವುದು. ಪ್ರಸ್ತುತ ನಗರಸಭೆ ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ನೇರಪಾವತಿ ಪೌರಕಾರ್ಮಿಕ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಯವರ ಕಾರ್ಯಾಲಯದ ಅಧಿಕೃತ ವೆಬ್‍ಸೈಟ್ www.kodagu.dudc.mrc.gov.in  ಹಾಗೂ ಮಡಿಕೇರಿ ನಗರಸಭೆ www.madikericity.mrc.gov.in  ಅಧಿಕೃತ ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ.ಸೋಮಸೇಖರ್ ಅವರು ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಮಡಿಕೇರಿ: ಪ್ರಸಕ್ತ(2026-27) ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ  ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‍ಸೈಟ್ https://kswdc.karnataka.gov.in  ರ ಮೂಲಕ ಅರ್ಜಿ ಸಲ್ಲಿಸುವುದು, ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಲಾಗಿದೆ.

 ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.  08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular