ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಶಾಲೆಗಳು, ವಿವಿಧ ಜಿಲ್ಲೆಗಳ ಕೋರ್ಟ್ ಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದ ಬೆನ್ನಲ್ಲೇ ಇದೀಗ ಮಡಿಕೇರಿ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ನ್ಯಾಯಾಲಯ ಅದಿಕೃತ ಇ-ಮೇಲ್ ಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಲಾಗಿದೆ.
ಬಾಂಬ್ ಬೆದರಿಕೆ ವಿಷಯ ತಿಳಿಯುತ್ತಿದ್ದಂತೆ ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಕೋರ್ಟ್ ನಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತಿದೆ.

