HomeKarnatakaಜೈಲಿನಲ್ಲಿಯೇ ಸಾವನ್ನಪ್ಪಿದ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ

ಜೈಲಿನಲ್ಲಿಯೇ ಸಾವನ್ನಪ್ಪಿದ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ

ಬೆಂಗಳೂರು: ಕೋರ್ಟ್ ನಿಂದ ತೀರ್ಪು ಹೊರಬೀಳುವ ಮುನ್ನವೇ 2008ರ ಬೆಂಗಳೂರಿನ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಜೈಲಿನಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಂಕಿತ ಉಗ್ರ 60 ವರ್ಷದ ಅಬ್ದುಲ್ ಖಾದರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಬಾಂಬ್ ಸ್ಫೋಟದಲ್ಲಿ ಅಬ್ದುಲ್ ಖಾದರ್ ಆರೋಪಿಯಾಗಿದ್ದು, ಕೆಲವೇ ದಿನಗಳಲ್ಲಿ ಸ್ಫೋಟ ಪ್ರಕರಣದ ಕುರಿತು ಕೋರ್ಟ್ ನಿಂದ ತೀರ್ಪು ಬರುವ ಸಾಧ್ಯತೆಯಿತ್ತು. ಆದರೆ ಅಷ್ಟರಲ್ಲೇ ಆರೋಪಿ ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಅಬ್ದುಲ್ ಖಾದರ್ 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ್ಯಾಯಾಂಗ ಬಂಧನದಲ್ಲಿದ್ದ. ಇಂದು (ಜೂನ್ 12) ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅಬ್ದುಲ್​ನನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದ್ರೆ, ಮಾರ್ಗಮಧ್ಯೆ ಹೃದಯಾಘಾತದಿಂದ ಅಬ್ದುಲ್ ಖಾದರ್ ಮೃತಪಟ್ಟಿದ್ದಾನೆ.

ಅಬ್ದುಲ್ ಖಾದರ್​​​ ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ತಕ್ಷಣ ಜೈಲು ಅಧಿಕಾರಿಗಳು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಬ್ದುಲ್ ಖಾದರ್ ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಯಾಗಿದ್ದು, 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಅಬ್ದುಲ್ ಖಾದರ್ ನನ್ನು ಬಂಧಿಸಿತ್ತು. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಅಂತಿಮ ಹಂತದಲ್ಲಿದ್ದು, ಇನ್ನು ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇತ್ತು. ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿದ್ದಾನೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular