BIG UPDATE : ಮಧುರೈ ರೈಲಿನಲ್ಲಿ ಭೀಕರ ‘ಅಗ್ನಿ ಅವಘಡ’ : 9 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಮಧುರೈ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಮೃತಪಟ್ಟು, ಹಲವರ ಸ್ಥಿತಿ ಗಂಭೀರವಾಗಿದೆ.

ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ ಪ್ರವಾಸಿಗರು ಮುಂಜಾನೆ ಸಿಲಿಂಡರ್ ನೊಂದಿಗೆ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ.ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ರೈಲಿನ ಕೊನೆಯ ಎರಡು ಬೋಗಿಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ರೈಲು  15 ದಿನಗಳ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಲಕ್ನೋದಿಂದ ಹೊರಟಿತ್ತು.ನಿಲ್ಲಿಸಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read