HomeKarnatakaಕಾಂಗ್ರೆಸ್ ಗೆ ವೋಟ್ ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ; ಚರ್ಚೆಗೆ ಕಾರಣವಾಯ್ತು ಶಾಸಕ ಹೆಚ್.ಸಿ...

ಕಾಂಗ್ರೆಸ್ ಗೆ ವೋಟ್ ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ; ಚರ್ಚೆಗೆ ಕಾರಣವಾಯ್ತು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ

ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಯೊಂದು ಭಾರಿ ಚರ್ಚೆಗೆ ಕಾರಣವಾಗಿದ್ದು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ಗೆ ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ. ವೋಟು ಹಾಕದೇ ಇರುವವರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಶಾಸಕ ಬಾಲಕೃಷ್ಣ ನೀಡಿರುವ ಹೇಳಿಕೆ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ನಮಗೆ ಲಾಭವಾಗುತ್ತೆ. ಇದರಿಂದ ಕಾಂಗ್ರೆಸ್ ಗೆ ಸಮಸ್ಯೆಯಾಗಲ್ಲ. ಮುಂದಿನ 5 ವರ್ಷ ನಮ್ಮದೇ ಸರ್ಕಾರ ಇರುತ್ತೆ ಎಂದು ಹೇಳಿದ್ದಾರೆ.

ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ ಬೂತ್ ನಲ್ಲಿ ನಮಗೆ ಹೆಚ್ಚು ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡುತ್ತೇವೆ. ವೋಟ್ ಹಾಕದಿದ್ದರೆ ಅಂತಹ ಬೂತ್ ಗಳ ಬಗ್ಗೆ ಯೋಚನೆ ಮಾಡ್ತೀವಿ. ಈ ಬಗ್ಗೆ ಜನ ಯೋಚಿಸಬೇಕು ಎಂದು ಹೇಳಿದ್ದಾರೆ. ಶಾಸಕ ಬಾಲಕೃಷ್ಣ ನೀಡಿರುವ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular