ಇಂಡೋನೇಷ್ಯಾದ ಬಂದಾ ಸಮುದ್ರದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಸದ್ಯ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.
ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್(GFZ) ಪ್ರಕಾರ, ಮಂಗಳವಾರ ಇಂಡೋನೇಷ್ಯಾದ ಬಂದಾ ಸಮುದ್ರ ಪ್ರದೇಶದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
137 ಕಿಮೀ (85 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ (BMKG) ಕಂಪನವನ್ನು ದೃಢಪಡಿಸಿದೆ. ಆದರೆ ಸುನಾಮಿಯ ಸಾಧ್ಯತೆ ಇಲ್ಲ ಎಂದು ಹೇಳಿದೆ.
