HomeIndiaBIG NEWS: ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ

BIG NEWS: ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೆಕ್ಟರ್ 22ರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಸೆಕ್ಟರ್ 22ರಲ್ಲಿನ ಟೆಂಟ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಹಾಕಲಾಗಿದ್ದ ಪೆಂಡಾಲ್ ಗಳು ಸುಟ್ಟು ಬಸ್ಮವಾಗಿವೆ. ಘಟನೆ ವೇಳೆ ಟೆಂಟ್ ನಲ್ಲಿ ಯಾರೂ ಇರಲಿಲ್ಲವಾದ್ದರಿಂದ ಯಾವುದೇ ಸಾವು-ನೋವು, ಅನಾಹುತ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಕೆಲದಿನಗಳ ಹಿಂದೆ ಕುಂಭಮೇಳ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಫೊಟಗೊಂಡು ಬೆಂಕಿ ಅವಘಡ ಸಂಭವಿಸಿತ್ತು. ನಿನ್ನೆಯಷ್ಟೇ ತ್ರಿವೇಣಿ ಸಂಗಮದ ಬಳಿ ಭೀಕರ ಕಾಲ್ತುಳಿತ ಸಂಭವಿಸಿ ಹಲವರು ಸಾವನ್ನಪ್ಪಿದ್ದಾರೆ. ಈ ಘಟನೆ ಬೆನ್ನಲ್ಲೇ ಇದೀಗ ಸೆಕ್ಟರ್ 22ರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular