HomeLatest NewsBREAKING: ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

BREAKING: ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಅಂತರಗಂಗೆ ಹೊಸ ಕೊಳದಲ್ಲಿ ಸುಮಾರು 40-45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪರಿಚಿತ ಶವದ ಕೈ ಮೇಲೆ ರಾಣಿ ಎಂದು ಹಾಗೂ ಎದೆಯ ಮೇಲೆ ಡಾ. ಅಂಬೇಡ್ಕರ್ ಎಂದು ಬರೆದಿರುವ ಟ್ಯಾಟೂ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿ ಯಾರೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular