BIG NEWS: ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಕೇಸ್: ಸುಪ್ರೀಂ ಕೋರ್ಟ್ ಕಳವಳ: ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಸೂಚನೆ

ನವದೆಹಲಿ: ಚಾಮರಾಜನಗರದ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಐದು ಹುಲಿಗಳ ಸಾವು ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದ ತಿಂಗಳು ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ ಶೇ.80ರಷ್ಟು ಖಾಲಿ ಇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಹುದ್ದೆ ಖಾಲಿ ಇರುವುದು ಸರಿಯಲ್ಲ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷಕ್ಕೆ ಎಲ್ಲಾ ರಾಜ್ಯಗಳು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ನಿರ್ದೇಶನ ನೀಡಿದೆ.

ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸಿಜೆಐ ಭೂಷಣ್ ಆರ್ ಗವಾಯಿ ನೇತೃತ್ವದ ಪೀಠ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read