ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಲೈ ಮಹದೇಶ್ವರನ ಪಾವಿತ್ರ್ಯತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿಯೂ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಅಕ್ರಮ ಮದ್ಯ ಸಂಗ್ರಹ, ಮಾರಾಟ ಮಡಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಮಹದೇಶ್ವರ ಬೆಟ್ಟದಲ್ಲಿ ಬರೋಬ್ಬರಿ 300 ಲೀಟರ್ ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಸಿದ್ದಪ್ಪಾ ಹಾಗೂ ಮುತ್ತುರಾಜ್ ಬಂಧಿತ ಆರೋಪಿಗಳು, ಅಕ್ರಮವಾಗಿ ಮದ್ಯ ತಂದು ಮಹದೇಶ್ವರ ಬೆಟ್ಟದಲ್ಲಿ ಆರೋಪಿಗಳು ಮಾರಾಟ ಮಾಡುತ್ತಿದ್ದರು. ಪ್ರಕರಣ ಧಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.