HomeKarnatakaಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು; ಹಾಗಾಗಿ ದಲಿತ ಸಿಎಂ ವಿಚಾರ ಪ್ರಸ್ತಾಪ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು; ಹಾಗಾಗಿ ದಲಿತ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದ ಡಿಸಿಎಂ

ಬೆಂಗಳೂರು: ಮಹದೇವಪ್ಪ ಅವರು ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕುಮಾರಪಾರ್ಕ್ ಸರಕಾರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ರಾಜಕಾರಣದಲ್ಲಿ ಬದಲಾವಣೆ, ಅಧಿಕಾರ ಹಸ್ತಾಂತರ, ದಲಿತ ಸಿಎಂ ಬಗ್ಗೆ ಆಗುತ್ತಿರುವ ಚರ್ಚೆ ಕುರಿತು ಪ್ರತಿಕ್ರಿಯಿಸಿದರು.

ಮಹದೇವಪ್ಪ ಅವರ ಹೇಳಿಕೆ ನೋಡಿದೆ. ಅದರ ಹೊರತಾಗಿ ಬೇರೆ ಯಾವುದೇ ಚರ್ಚೆ ಇಲ್ಲ. ಅವರಿಗೆ ಸಿಎಂ ಬದಲಾವಣೆ ಮಾಹಿತಿ ಇರಬಹುದು, ಆದರೆ ಆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಪ್ರವಾಸ ವಿಚಾರವಾಗಿ, ನಾನು ನಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಗಳ ಮೇಲೆ ದೆಹಲಿಗೆ ಹೋಗಬೇಕಾಗಿದೆ. ನಗರಾಭಿವೃದ್ಧಿ ಇಲಾಖೆ ಯೋಜನೆಗೆ ಸಂಬಂಧಿಸಿದಂತೆ 1 ಲಕ್ಷ ಕೋಟಿ ರೂ. ನೀಡಲಾಗುತ್ತಿದ್ದು, ದೊಡ್ಡ ನಗರಗಳಿಗೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ನಮ್ಮ ನಗರಾಭಿವೃದ್ಧಿ ಸಚಿವರ ಬಳಿ ಚರ್ಚೆ ಮಾಡಿ, 2 ಹಾಗೂ 3ನೇ ಹಂತದ ನಗರಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಿದ್ಧಪಡಿಸಲು ಹೇಳುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಖಾಲಿ ಹುದ್ದೆಗಳ ಭರ್ತಿಗೆ ಬಿಜೆಪಿಯವರ ಪ್ರತಿಭಟನೆ ವಿಚಾರವಾಗಿ, ಅವರು ಅಧಿಕಾರದಲ್ಲಿದ್ದಾಗ ಯಾಕೆ ಮಾಡಲಿಲ್ಲ? ಶೀಘ್ರದಲ್ಲೇ ನಾವು ಹುದ್ದೆಗಳ ನೇಮಕಾತಿ ಮಾಡುತ್ತೇವೆ. ನಿರುದ್ಯೋಗಿ ಯುವಕರಿಗೆ ತೊಂದರೆಯಾಗಬಾರದು ಎಂದು ಯುವನಿಧಿ ಯೋಜನೆ ನೀಡಿದ್ದೇವೆ. ಒಳ ಮೀಸಲಾತಿ ಸೇರಿದಂತೆ ಅನೇಕ ವಿಚಾರವಾಗಿ ವಿಳಂಬವಾಗಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular