BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ RI


ಬೆಂಗಳೂರು: 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಆರ್.ಐ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಬಿಬಿಎಂಪಿಯ ಮಹದೇವಪುರ ಕಂದಾಯ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಟರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ನಿವೇಶನದ ಖಾತೆ ಮಾಡಿಸಿಕೊಡಲು ಮುಂಗಡವಾಗಿ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಇನ್ಸ್ ಪೆಕ್ಟರ್ ಮಂಜುನಾಥ್ ಹೂಗಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕಚೇರಿಯಲ್ಲಿ ಹಣ ಪಡೆಯುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಸಿಕ್ಕಿಬಿದ್ದಿದ್ದಾರೆ.

ನಿನ್ನೆಯಷ್ಟೇ ಮಹದೇವಪುರ ಕಂದಾಯ ಕಚೇರಿ ಸೇರಿದಂತೆ ಬೆಂಗಳೂರಿನ 45 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಆದರೂ ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಲಂಚಕ್ಕೆ ಕೈಯೊಡ್ಡಿದ್ದ ಕಂದಾಯ ನಿರೀಕ್ಷಕ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read