HomeKarnatakaBREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು| Mahakumbh...

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು| Mahakumbh Stampede

ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಓರ್ವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಮೂಲಕ ಕಾಲ್ತುಳಿತ ಘಟನೆಯಲ್ಲಿ ರಾಜ್ಯದ ಐವರು ಸಾವನ್ನಪ್ಪಿದ್ದಾರೆ.

ರಾಜನಾಥ್ ಮಹಾರಾಜ್ ಎಂಬ ಕರ್ನಾಟಕದ ನಾಗಾಸಾಧು ಕುಂಭಮೇಳದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಚಿತ್ರರುರ್ಗದ ಬಂಜಾರಾ ಗುರುಪೀಠದ ನಾಗಾಸಾಧುವಾಗಿದ್ದ ರಾಜನಾಥ್ ಮಹಾರಾಜ್, 15 ದಿನಗಳ ಹಿಂದಷ್ಟೇ ಕುಂಭಮೇಳಕ್ಕೆ ತೆರಳಿದ್ದರು. ಮೌನಿ ಅಮವಾಸ್ಯೆ ದಿನ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾಜನಾಥ್ ಮಹಾರಾಜ್ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ತರುವ ವ್ಯವಸ್ಥೆಯನ್ನು ಮಾಡಬೇಕು ಎಂದು ಲಂಬಾಣಿ ಗುರುಪೀಠದ ಸೇವಾಲಾಲ್ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular