BREAKING NEWS: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕದ ಮತ್ತೋರ್ವರು ಸಾವು: ರಾಜ್ಯದ ಭಕ್ತರ ಸಾವಿನ ಸಂಖ್ಯೆ ಮೂರಕ್ಕೇರಿಕೆ| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈವರೆಗೆ ರಾಜ್ಯದ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಮೂಲದ ತಾಯಿ ಹಾಗೂ ಮಗಳು ಜ್ಯೋತಿ ಹತ್ತರವಾಠ (50) ಪುತ್ರಿ ಮೇಘಾ ಹತ್ತರವಾಠ (25) ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಬೆಳಗಾವಿ ನಗರ ಮತ್ತೋರ್ವ ನಿವಾಸಿ ಕೂಡ ಕಾಲ್ತುಳಿದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ನಗರದ ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಮೃತರು. ಅವರ ಪತ್ನಿ ಕಾಂಚನಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಹೋಗಿದ್ದ ಬೆಳಗಾವಿಯ 30 ಜನರಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read