BREAKING: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ: ರಾಜ್ಯದ ನಾಲ್ವರು ಸಾವು; ಏರುತ್ತಲೇ ಇದೆ ಕನ್ನಡಿಗರ ಸಾವಿನ ಸಂಖ್ಯೆ| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾರಿ ದುರಂತ ಸಂಭವಿಸಿದ್ದು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೆ ಹೆಚ್ಚುತ್ತಲೇ ಇರುವುದು ಆತಂಕ ತಂದಿದೆ.

ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮಹಾ ಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಹೋಗಿದ್ದ ಹಲವರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಿದ್ದಾರೆ. ಕರ್ನಾಟಕದ ಬೆಳಗಾವಿ ಮೂಲದ ಒಟ್ಟು ನಾಲ್ವರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ.

ಬೆಳಗಾವಿಯ ವಡಗಾವಿ ಮೂಲತ ತಾಯಿ ಮಗಳು ಜೋತಿ ಹಾಗೂ ಮೇಘಾ, ಶೆಟ್ಟಿಹಳ್ಳಿ ನಿವಾಸಿ ಅರುಣ್ ಕೊಪರ್ಡೆ ಹಾಗೂ ಶಿವಾಜಿ ನಗರ ನಿವಾಸಿ ಮಹಾದೇವಿ ಹನುಮಂತ ಬಾವನೂರ ಸಾವನ್ನಪ್ಪಿದ್ದಾರೆ.

ಅರುಣ್ ಪತ್ನಿ ಕಾಂಚನಾ ಕೋಪರ್ಡೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮುಂಜಾನೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕೆ ತೆರಳುತ್ತಿದ್ದ ವೇಳೆ ಅಪಾರಸಂಖ್ಯೆಯಲ್ಲಿ ಜನರು ಏಕಾಏಕಿ ನುಗ್ಗಿದ ಪರಿಣಾಮ ಕಾಲ್ತುಳಿತ ಸಂಭವಿಸಿದ್ದು, ಹಲವರು ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read