HomeIndiaBREAKING NEWS: ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಯುವಕ ವಿದ್ಯುತ್ ಪ್ರವಹಿಸಿ ಸಾವು!

BREAKING NEWS: ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಯುವಕ ವಿದ್ಯುತ್ ಪ್ರವಹಿಸಿ ಸಾವು!

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಮೂಲದ ಯುವಕ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ್ದಾನೆ.

ಪ್ರವೀಣ್ ಹೊಸಮನಿ (27) ಮೃತ ಯುವಕ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದ ಪ್ರವೀಣ್, 15 ದಿನಗಳ ಹಿಂದೆ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿದ್ದ ಮಹಾಕುಂಭ ಮೇಳಕ್ಕೆ ತೆರಳಿದ್ದ. ಕುಂಭಮೇಳ ಯಾತ್ರೆ ಮುಗಿಸಿ ಪ್ರಯಾಗ್ ರಾಜ್ ನಿಂದ ಅಯೋಧ್ಯೆಗೆ ತೆರಳುತ್ತಿದ್ದ ವೇಳೆ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ್ದಾನೆ.

ಗೋರಖ್ ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಅವಘಡದಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular