ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ: ಹೆಲಿಕಾಪ್ಟರ್ ನಲ್ಲಿ ಪುಷ್ಪವೃಷ್ಟಿಗರೆದು ಸಂತರಿಗೆ ನಮನ

ಪ್ರಯಾಗ್ ರಾಜ್: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಗಿದ್ದು, ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಇಂದು ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮಹಾಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಶಾಹಿ ಸ್ನಾನಕ್ಕೆ ಹರಿದು ಬಂದಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾವಿರಾರು ಸಾದು-ಸಂತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಅಮೃತ ಸ್ನಾನ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಸಾದು-ಸಂತರ ಮೇಲೆ ಪುಷ್ಪಮಳೆಗರೆಯಲಾಯಿತು.

ಸಾದು-ಸಂತರಿಂದ ಅಮೃತ ಸ್ನಾನದ ಬಳಿಕ ಭಕ್ತರಿಗೆ, ಸಾರ್ವಜನಿಕರಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಲಕ್ಷಾಂತರ ಭಕ್ತರು ತ್ರುವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಮೌನಿ ಅಮವಾಸ್ಯೆಯ ದಿನದಂದು ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದರೆ ಸಕಲ ಪಾಪಗಳು ಪರಿಹಾರವಾಗಲಿದೆ. ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಭಿಕೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read