HomeKarnatakaBREAKING: 50 ತುಂಡುಗಳಾಗಿ ಕತ್ತರಿಸಿ ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ

BREAKING: 50 ತುಂಡುಗಳಾಗಿ ಕತ್ತರಿಸಿ ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಗೊತ್ತಾಗಿದೆ. ಮಹಾಲಕ್ಷ್ಮಿ ಹತ್ಯೆಯ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯ ವಿಚಾರಣೆಗಾಗಿ ಬೆಂಗಳೂರು ಪೊಲೀಸರು ಒಡಿಶಾಕ್ಕೆ ತೆರಳಿದ್ದರು. ಶಂಕಿತ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನ ವೈಯಾಲಿಕಾವಲ್ ಪ್ರದೇಶದ ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಮಹಾಲಕ್ಷ್ಮಿ ವಾಸಿಸುತ್ತಿದ್ದರು. ಸೆಪ್ಟೆಂಬರ್ 21 ರಂದು ಫ್ರಿಜ್ ನಲ್ಲಿ ಆಕೆಯ ದೇಹದ ತುಂಡುಗಳು ಪತ್ತೆಯಾಗಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಡಿಶಾದ ಭದ್ರಕ ಜಿಲ್ಲೆ ದುಶಿರಿ ಠಾಣೆ ವ್ಯಾಪ್ತಿಯ ಬೂಯಕಪುರದ ಬಳಿ ಮುಕ್ತಿ ರಂಜನ್ ರಾಯ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ಫಂಡಿ ಗ್ರಾಮದ ಮನೆಗೆ ಹೋಗಿದ್ದ ಆತ ಕೆಲ ಕಾಲ ಮನೆಯಲ್ಲಿದ್ದ. ನಿನ್ನೆ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಬೈಕ್ ನಲ್ಲಿ ಲ್ಯಾಪ್ ಟಾಪ್ ಇಟ್ಟು ಬೆಳಗ್ಗೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular