HomeKarnatakaಮಹಾರಾಣಿ ಕಾಲೇಜು ಹಾಸ್ಟೇಲ್ ನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಮಹಾರಾಣಿ ಕಾಲೇಜು ಹಾಸ್ಟೇಲ್ ನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಮಹಾರಾಣಿ ಮಹಿಳಾ ಕಾಲೇಜು ಹಾಸ್ಟೇಲ್ ನಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

19 ವರ್ಷದ ಪಾವನಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರಥಮ ವರ್ಷದ ಬಿಎಸ್ ಇ ಓದುತ್ತಿದ್ದ ಪಾವನಾ, ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾಳೆ.

ಹಾಸ್ಟೇಲ್ ರೂಂ ನಂ.17ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿಯ ಸ್ನೇಹಿತರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ವಿದ್ಯಾರ್ಥಿನಿ ಪಾವನಾ, ಆಪ್ ಒಂದರಲ್ಲಿ 15 ಸಾವಿರ ಹೂಡಿಕೆ ಮಾಡಿದ್ದಳು ಎಂಬುದು ಗೊತ್ತಾಗಿದೆ. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular