HomeIndiaBREAKING: ಹಾವು ಕಡಿದು ಮೂವರು ವಿದ್ಯಾರ್ಥಿನಿಯರು ಸಾವು; ಓರ್ವ ಬಾಲಕಿ ಸ್ಥಿತಿ ಗಂಭೀರ

BREAKING: ಹಾವು ಕಡಿದು ಮೂವರು ವಿದ್ಯಾರ್ಥಿನಿಯರು ಸಾವು; ಓರ್ವ ಬಾಲಕಿ ಸ್ಥಿತಿ ಗಂಭೀರ

ಗಡ್ಚಿರೋಲಿ: ಹಾವು ಕಡಿದು ಮೂವರು ಬಾಲಕಿಯರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಓರ್ವಳ ಸ್ಥಿತಿ ಗಂಭಿರವಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನ ಆಶ್ರಮ ಶಾಲೆ ಹಾಸ್ಟೆಲ್ ನಲ್ಲಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಆಶ್ರಮ ಶಾಲೆಯ 6 ಬಾಲಕಿಯರು ಹಾವು ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದು, ಇತರ ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ.

ಇನ್ನೂ 14 ಬಾಅಲಕಿಯರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಧನೋಕಾ ತಾಲೂಕಿನ ಆಶ್ರಮ ಶಾಲೆಯ ಹಾಸ್ಟೆಲ್‌ನಲ್ಲಿ ಸುಮಾರು 79 ವಿದ್ಯಾರ್ಥಿನಿಯರು ನೆಲದ ಮೇಲೆ ಮಲಗಿದ್ದರು. ಈ ವೇಳೆ ಇಂದು ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ಹಾವು ಕಚ್ಚಿದೆ ಎನ್ನಲಾಗಿದೆ. ಗಡ್ಚಿರೋಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಈ ಘಟನೆಯನ್ನ ದೃಢಪಡಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮೂವರು ಬಾಲಕಿಯರು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನ ಕೇಳಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular