HomeIndiaBIG NEWS: ಮಹಾರಾಷ್ಟ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಮೈತ್ರಿ ಬೆನ್ನಲ್ಲೇ ಬಿಗ್ ಶಾಕ್ ಶಾಕ್: 12 ಕಾಂಗ್ರೆಸ್ ಕಾರ್ಯಕರ್ತರು...

BIG NEWS: ಮಹಾರಾಷ್ಟ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಮೈತ್ರಿ ಬೆನ್ನಲ್ಲೇ ಬಿಗ್ ಶಾಕ್ ಶಾಕ್: 12 ಕಾಂಗ್ರೆಸ್ ಕಾರ್ಯಕರ್ತರು ಅಮಾನತು

ಮುಂಬೈ: ಮಹಾರಾಷ್ಟ್ರದ ಅಂಬರ್ನಾಥ್ ಪುರಸಭೆಯಲ್ಲಿ ಕಾಂಗ್ರೆಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡು, ಬಿಜೆಪಿಯ ತೇಜಶ್ರೀ ಕರಂಜುಲೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತವನ್ನಾಗಿ ಮಾಡುವುದಾಗಿ ಹೇಳುತ್ತಿದ್ದ ಬಿಜೆಪಿ ಅಧಿಕಾರದ ಆಸೆಗೆ ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೇರಿದ್ದು ರಾಷ್ಟ್ರಾದ್ಯಂತ ತೀರ್ವ ಚರ್ಚೆಗೆ ಗ್ರಾಸವಾಗಿರುವಾಗಲೇ ಕಾಂಗ್ರೆಸ್ ಕಾರ್ಯಕರ್ತರುಗೆ ಬಿಗ್ ಶಾಕ್ ಎದುರಾಗಿದೆ.

ಅಂಬರ್ನಾಥ್ ಪುರಸಭೆ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೆನೆ 27, ಬಿಜೆಪಿ 16 ಹಾಗೂ ಕಾಂಗ್ರೆಸ್ 12 ಮತ್ತು ಎನ್ ಸಿಪಿ(ಅಜಿತ್ ಪವಾರ್)೪ ಸ್ಥಾನಗಳನ್ನು ಪಡೆದಿವೆ. ಅಂಬರ್ನಾಥ್ ಪುರಸಭೆ 60 ಸದಸ್ಯರ ಸಂಖ್ಯಾಬಲ ಹೊಂದಿದೆ. ಬಿಜೆಪಿಹಾಗೂ ಕಾಂಗ್ರೆಸ್ ಮೈತ್ರಿ ಮೂಲಕ ಬಿಜೆಪಿಯ ತೇಜಶ್ರೀ ಕರಂಜುಲೆ ಮೇಯರ್ ಆಗಿ ಆಯ್ಕೆಯಾಗಿದ್ದರು. ಈ ಮೈತ್ರಿಗೆ ಕಾಅಂಗ್ರೆಸ್ ಹಾಗೂ ಬಿಜೆಪಿ ಉಭಯ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ 12 ಕಾಂಗ್ರೆಸ್ ಕಾರ್ಯಕರ್ತರನ್ನು ಅಮನತು ಮಾಡಲಾಗಿದೆ. ಮಾಹಾರಾಷ್ಟ್ರದ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗನೇಷ್ ಪಾಟೀಲ್, ಅಂಬರ್ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು ತಮ್ಮ ಅಮಾನತು ತಿಳಿಸಿದ್ದಾರೆ. ಮೈತ್ರಿ ಬೆಳವಣಿಗೆ ಸೂಕ್ತವಲ್ಲ. ರಾಜ್ಯಾಧ್ಯಕ್ಷ ಹರ್ಷವರ್ಧನ್ ಸೂಚನೆಯಂತೆ ಅಮಾನತುಗೊಳಿಸಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಮೈತ್ರಿಕೂಟಗಳನ್ನು ತಿರಸ್ಕರಿಸಿದ್ದರು. ಮೈತ್ರಿಯಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular