HomeIndiaBREAKING: ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಪಂಕಜಾ ಮುಂಡೆ ಸೇರಿ ನೂತನ ಸಚಿವ ಪ್ರಮಾಣವಚನ ಸ್ವೀಕಾರ

BREAKING: ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಪಂಕಜಾ ಮುಂಡೆ ಸೇರಿ ನೂತನ ಸಚಿವ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗಿದ್ದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗ್ಪುರದ ರಾಜಭವನದಲ್ಲಿ ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ,

ಬಿಜೆಪಿ, ಎನ್ಸಿಪಿ ಮತ್ತು ಶಿವಸೇನೆ ನಡುವೆ ಖಾತೆ ಹಂಚಿಕೆ ಬಳಿಕ ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ, ಅಜಿತ್ ಪವಾರ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿ ಹಲವು ನಾಯಕರು ಭಾಗವಹಿಸಿದ್ದರು.

ಚಂದ್ರಶೇಖರ ಬಾವನಕುಲೆ, ನಿತೇಶ್ ರಾಣೆ, ಶಿವೇಂದ್ರರಾಜ ಭೋಸಲೆ, ಚಂದ್ರಕಾಂತ ಪಾಟೀಲ, ಪಂಕಜ್ ಭೋಯಾರ್, ಮಂಗಲ್ ಪ್ರಭಾತ್ ಲೋಧಾ, ಗಿರೀಶ್ ಮಹಾಜನ್, ಜೈಕುಮಾರ್ ರಾವಲ್, ಪಂಕಜಾ ಮುಂಡೆ, ರಾಧಾಕೃಷ್ಣ ವಿಖೆ ಪಾಟೀಲ್, ಗಣೇಶ ನಾಯ್ಕ, ಮೇಘನಾ ಬೋರ್ಡಿಕರ್, ಮಾಧುರಿ ಮಿಸಾಲ್, ಅತುಲ್ ಸೇವ್, ಅಶೋಕ್ ಉಯಿಕೆ, ಜೈಕುಮಾರ್ ಮೋರೆ, ಸಂಜಯ್ ಸಾವ್ಕರೆ, ಆಶಿಶ್ ಶೆಲಾರ್, ಉದಯ್ ಸಮಂತ್, ಪ್ರತಾಪ್ ಸರ್ನಾಯಕ್, ಶಂಭುರಾಜ್ ದೇಸಾಯಿ, ಆಶಿಶ್ ಜೈಸ್ವಾಲ್, ಭರತ್ ಗೋಗಾವಲೆ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular