HomeIndiaBIG NEWS: ಅಯೋಧ್ಯೆ ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ

BIG NEWS: ಅಯೋಧ್ಯೆ ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಪವಿತ್ರ ನಗರಕ್ಕೆ ಭೇಟಿ ನೀಡಿರುವ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಮಂತ್ ಅವರು ಈ ಮಾಹಿತಿಯನ್ನು ಒದಗಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಶಿವಸೇನೆ ಪರವಾಗಿ, ಮಹಾರಾಷ್ಟ್ರ ಸಿಎಂ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಮ ಮಂದಿರಕ್ಕಾಗಿ 11 ಕೋಟಿ ರೂ.ಗಳನ್ನು ನೀಡಿದ್ದಾರೆ. ಇಂದು ನಾವು ಚೆಕ್ ಹಸ್ತಾಂತರಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಮಂತ್ ಅಯೋಧ್ಯೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಇತರರೊಂದಿಗೆ ಸಮಂತ್ ಜೊತೆ ಅಯೋಧ್ಯೆಗೆ ತೆರಳಿದ್ದರು. 11 ಕೋಟಿ ಮೌಲ್ಯದ ಚೆಕ್ ಅನ್ನು ರಾಮ ಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ ಎಂದು ಸಮಂತ್ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular