BIG NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಂದ್ರ ಫಡ್ನವಿಸ್ ನೇಮಕ ಸಾಧ್ಯತೆ

ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಈ ಕುರಿತಂತೆ ದೇವೇಂದ್ರ ಫಡ್ನವೀಸ್ ಅವರ ಜೊತೆ ಮಾತುಕತೆ ನಡೆಸಿದ್ದು, ಇತರೆ ಬಿಜೆಪಿ ನಾಯಕರು ಸಹ ಈ ಪ್ರಸ್ತಾವನೆಗೆ ಸಮ್ಮತಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರವಧಿ ಈಗಾಗಲೇ ಪೂರ್ಣಗೊಂಡಿದ್ದು, ಮುಂಬರುವ ದಿನಗಳಲ್ಲಿ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಇರುವುದರಿಂದ ಅಷ್ಟರೊಳಗಾಗಿ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಉದ್ದೇಶವನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಹೊಂದಿದ್ದರು. ಹೀಗಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡುವುದು ಸೂಕ್ತ ಎಂಬ ಭಾವನೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಕೇಂದ್ರ ನಾಯಕರಲ್ಲಿದೆ ಎಂದು ಹೇಳಲಾಗಿದೆ.

ಹೀಗಾಗಿಯೇ ಕೆಲ ದಿನಗಳ ಹಿಂದೆ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ಆಗಮಿಸಿದ್ದ ದೇವೇಂದ್ರ ಫಡ್ನವೀಸ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕುರಿತಂತೆ ಮಾತುಕತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕೆ ದೇವೇಂದ್ರ ಫಡ್ನವೀಸ್ ಕೂಡ ಒಪ್ಪಿಗೆ ಸೂಚಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಕೆಲವಾರಗಳಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read