ಮಹಾರಾಷ್ಟ್ರದಲ್ಲಿ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ: ಮೊಳಗಿದ ಅಭಿಮಾನದ ಕೂಗು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಮಹಾರಾಷ್ಟ್ರದ ಜತ್ ವಿಧಾನಸಭೆ ಕ್ಷೇತ್ರದ ಸಂಕ್ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ, ಮಹಾ ವಿಕಾಸ ಅಘಾಡಿ ಅಭ್ಯರ್ಥಿ ಕಾಂಗ್ರೆಸ್ ನ ವಿಕ್ರಂ ಸಾವಂತ್ ಅವರಿಗೆ ಮತನೀಡಿ ಆಶೀರ್ವದಿಸುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ನುಡಿದಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ಕೊಟ್ಟು, ಜನರ ವಿಶ್ವಾಸ ಉಳಿಸಿಕೊಂಡಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಸರ್ಕಾರದ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಈ ವಿಚಾರವನ್ನು ಮತದಾರರಿಗೆ ಮನದಟ್ಟು ಮಾಡಿ, ಅಭಿವೃದ್ಧಿಗೆ ಮತ ನೀಡುವಂತೆ ಕೋರಿದ್ದಾರೆ.

ಸಂಕ್ ಪಟ್ಟಣದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ವೇದಿಕೆಗೆ ಬರುತ್ತಿದ್ದಂತೆ ಟಗರು ಬಂತು ಟಗರು ಹಾಡಿನೊಂದಿಗೆ ಅಭಿಮಾನದ ಕೂಗು ಮೊಳಗಿದೆ.

ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಜಮಖೇಡ್ ತಾಲೂಕಿನ ಚೋಂಡಿಯಲ್ಲಿರುವ ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ ಪುಣ್ಯಲೋಕಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ, ಗೌರವ ಸಲ್ಲಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್, ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಬಾಬಾ ಸಾಹೇಬ್ ತೋರಟ್ ಅವರು ಉಪಸ್ಥಿತರಿದ್ದರು.

ಮಹಾರಾಷ್ಟ್ರದ ನಾಂದೇಡ್‌ನ ಮುಖೇಡ್ ವಿಧಾನಸಭಾ ಕ್ಷೇತ್ರದಲ್ಲಿಯೂ ಚುನಾವಣಾ ಪ್ರಚಾರ ಕೈಗೊಂಡಿದ್ದ ಸಿಎಂ  ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read