HomeIndiaರತನ್ ಟಾಟಾಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಆಗ್ರಹ.!

ರತನ್ ಟಾಟಾಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಆಗ್ರಹ.!

ನವದೆಹಲಿ: ಮಹಾರಾಷ್ಟ್ರ ಸರ್ಕಾರ ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ರತನ್ ಟಾಟಾ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸಭೆ ದಿವಂಗತ ಕೈಗಾರಿಕೋದ್ಯಮಿಯ ನಿಧನಕ್ಕೆ ಸಂತಾಪ ಸೂಚಿಸುವ ನಿರ್ಣಯವನ್ನು ಅಂಗೀಕರಿಸಿತು.

ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಕಂಪನಿ ಬುಧವಾರ ತಡರಾತ್ರಿ ತಿಳಿಸಿದೆ. ಅವರನ್ನು ಮುಂಬೈನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular