ಮಹಾರಾಷ್ಟ್ರದ ಶಿವಸೇನಾ ನಾಯಕಿಯನ್ನು ಕರೆದೊಯ್ಯಲು ಬರುತ್ತಿದ್ದ ಹೆಲಿಕಾಪ್ಟರ್, ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕಿ ಸುಷ್ಮಾ ಅವರನ್ನು ಸಭೆಯೊಂದರಲ್ಲಿ ಪಾಲ್ಗೊಳ್ಳಲು ಕರೆದೊಯ್ಯಲು ಬಂದ ವೇಳೆ ರಾಯಗಢ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಈ ಅವಘಡ ಸಂಭವಿಸಿದೆ.
ಇದರ ಪರಿಣಾಮ ಹೆಲಿಕಾಪ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತದಲ್ಲಿ ಪೈಲೆಟ್ ಸೇರಿದಂತೆ ಹೆಲಿಕ್ಯಾಪ್ಟರ್ ನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
https://twitter.com/iNidhisolanki/status/1786260733367304273?ref_src=twsrc%5Etfw%7Ctwcamp%5Etweetembed%7Ctwterm%5E1786260733367304273%7Ctwgr%5Ed210fe34bd189b579944fae732de16e1979ddeba%7Ctwcon%5Es1_&ref_url=https%3A%2F%2Fwww.freepressjournal.in%2Fmumbai%2Fmaharashtra-helicopter-that-arrived-to-pick-up-shiv-sena-ubt-leader-sushma-andhare-crashes-in-raigad-visuals-surface