BREAKING NEWS: ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ ಮತದಾನ ಅಂತ್ಯ: 5 ಗಂಟೆಯವರೆಗಿನ ಮತದಾನದ ವಿವರ ಇಲ್ಲಿದೆ

ಮುಂಬೈ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ಮತದಾನದ ಸಮಯ ಮುಕ್ತಾಯವಾಗಿದೆ. ಎರಡೂ ರಾಜ್ಯಗಳ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಜಾರ್ಖಂಡ್ ನಲ್ಲಿ ಇಂದು 2ನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಜಾರ್ಖಂಡ್ ನಲ್ಲಿಯೂ ಚುನಾವಣಾ ಸಮಯ ಮುಕ್ತಾಯವಾಗಿದೆ. ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರಿಗೆ ಮಾತ್ರ 5 ಗಂಟೆ ಬಳಿಕ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಎರಡೂ ರಾಜ್ಯಗಳಲ್ಲಿ ಸಂಜೆ 5 ಗಂಟೆಯವರೆಗಿನ ಮತದಾನದ ವಿವರ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.58.22ರಷ್ಟು ಮತದಾನವಾಗಿದೆ. ಜಾರ್ಖಂಡ್ ನಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.59ರಷ್ಟು ಮತದಾನವಾಗಿದೆ.

ಕೆಲವೇ ಹೊತ್ತಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆ ಹೊರಬೀಳಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read