HomeIndiaBIG UPDATE: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನಲ್ಲಿ ಮಧ್ಯಾಹ್ನ 1 ಗಂಟೆಯವರೆಗಿನ ಮತದಾನದ ವಿವರ

BIG UPDATE: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನಲ್ಲಿ ಮಧ್ಯಾಹ್ನ 1 ಗಂಟೆಯವರೆಗಿನ ಮತದಾನದ ವಿವರ

ಮುಂಬೈ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿಯೂ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಜಾರ್ಖಂಡ್ ನಲ್ಲಿ ಇಂದು 2ನೇ ಹಂತದ ಚುನಾವಣೆ ನಡೆಯುತ್ತಿದ್ದು, ಎರಡನೇ ಹಂತದ 38 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಸಂಜೆ 5 ಗಮ್ತೆಯವರೆಗೂ ನಡೆಯಲಿದೆ.

ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.32.18ರಷ್ಟು ಮತದಾನವಾಗಿದೆ. ಜಾರ್ಖಂಡ್ ನಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.47.92ರಷ್ಟು ಮತದಾನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular