HomeIndiaSHOCKING: ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಯುವಕನ ಹೊಸಕಿ ಹಾಕಿದ ಕಾಡಾನೆ

SHOCKING: ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಯುವಕನ ಹೊಸಕಿ ಹಾಕಿದ ಕಾಡಾನೆ

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 23 ವರ್ಷದ ಯುವಕನೊಬ್ಬ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾನೆ.

ಗಡ್ಚಿರೋಲಿಯ ಅರಣ್ಯದಲ್ಲಿ ಗುರುವಾರ ಈ ಘಟನೆ ನಡೆದಿದೆ. ಚಂದ್ರಾಪುರ ಜಿಲ್ಲೆಯ ನವೇಗಾಂವ್‌ನ ಶಶಿಕಾಂತ್ ರಾಮಚಂದ್ರ ಸಾತ್ರೆ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಶಶಿಕಾಂತ್ ಅರಣ್ಯ ವಿಭಾಗದಲ್ಲಿ ಕೇಬಲ್ ಹಾಕುವ ಕೆಲಸಕ್ಕಾಗಿ ಸಹೋದ್ಯೋಗಿಗಳೊಂದಿಗೆ ಗಡ್‌ಚಿರೋಲಿಗೆ ಹೋಗಿದ್ದ.

ಅಕ್ಟೋಬರ್ 23 ರಂದು ಚಟಗಾಂವ್-ಗಡ್ಚಿರೋಲಿ ಅರಣ್ಯ ಪ್ರದೇಶದಿಂದ ಕಾಡಾನೆಯೊಂದು ಕುಂಘಡ ರೈ ಪ್ರದೇಶಕ್ಕೆ ಪ್ರವೇಶಿಸಿತ್ತು. ಸಮೀಪದಲ್ಲಿ ಕಾಡಾನೆ ಇರುವ ಬಗ್ಗೆ ಸ್ಥಳೀಯರು ಎಚ್ಚರಿಕೆ ನೀಡಿದರೂ, ಶಶಿಕಾಂತ್ ಮತ್ತು ಇತರ ಇಬ್ಬರು ಅದನ್ನು ನೋಡಲು ಗುರುವಾರ ತೆರಳಿದ್ದರು. ಆನೆ ನೋಡಿದ ಶಶಿಕಾಂತ್ ದೂರದಿಂದ ಸೆಲ್ಫಿ ತೆಗೆಯಲು ಯತ್ನಿಸುತ್ತಿದ್ದಾಗ ಏಕಾಏಕಿ ದಾಳಿ ಮಾಡಿ ತುಳಿದು ಕೊಂದು ಹಾಕಿದೆ. ಇನ್ನಿಬ್ಬರು ಕಾರ್ಮಿಕರು ಅಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular