ಪುಣೆ: ಶಾಲೆಯ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಪರಿಶೀಲಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡುಬಂದಿದ್ದಕ್ಕೆ ಯಾರಿಗೆ ತಿಂಗಳ ರಜೆ ಎಂಬುದನ್ನು ಪರಿಶೀಲಿಸಲು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮೆರೆಯಲಾಗಿದೆ. ಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡು ಬಂದಿದೆ ಎಂದು ಮುಖ್ಯ ಶಿಕ್ಷಕ ಈ ರೀತಿ ದುರ್ವರ್ತನೆ ತೋರಿದ್ದಾನೆ.
ಮುಖ್ಯ ಶಿಕ್ಷಕನ ವರ್ತನೆ ಹಾಗೂ ಆತಿಗೆ ಸಹಾಯ ಮಾಡಿದ ಸಹಾಕ ಸಿಬ್ಬಂದಿ ವರ್ತನೆಗೆ ವಿದ್ಯಾರ್ಥಿನಿಯರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯ ಹಾಗೂ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯ ಯಾವ ವಿದ್ಯಾರ್ಥಿನಿಯರು ಮುಟ್ಟಾಗಿದ್ದಾರೆ ಯಾರು ಆಗಿಲ್ಲ ಎಂಬುದನ್ನು ಪರಿಶೀಲಿಸಲು ಮಹಿಳಾ ಪ್ಯೂನ್ ಒಬ್ಬರಿಗೆ ಹೇಳಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಚೆಕ್ ಮಾಡಲಾಗಿದೆ.
ಪ್ರಕರಣ ಸಂಬಂಧ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು, ಇಬ್ಬರು ಟ್ರಸ್ಟಿಗಳು, ಓರ್ವ ಪ್ಯೂನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯ ಪ್ರಾಂಶುಪಾಲ ಹಾಗೂ ಪ್ಯೂನ್ ಇಬ್ಬರನ್ನು ಬಂಧಿಸಲಾಗಿದ್ದು, ನಾಲ್ವರ ವಿರುದ್ಧ ಪೊಲೀಸರು ತನಿಖೆ ನಡೆಸಿದ್ದಾರೆ.