BREAKING NEWS: ದಾಳಿ ಹಿನ್ನೆಲೆ ಕರ್ನಾಟಕಕ್ಕೆ ಬಸ್ ಸೇವೆ ಸ್ಥಗಿತಗೊಳಿಸಿದ ಮಹಾರಾಷ್ಟ್ರ

ಮುಂಬೈ: MSRTC ಬಸ್ ಮೇಲೆ ದಾಳಿ ನಡೆದ ನಂತರ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಶನಿವಾರ ಕರ್ನಾಟಕಕ್ಕೆ ರಾಜ್ಯ ಸಾರಿಗೆ ಬಸ್‌ಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ಚಲಿಸುತ್ತಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ(MSRTC) ಬಸ್ ಮೇಲೆ ಶುಕ್ರವಾರ ರಾತ್ರಿ ಕರ್ನಾಟಕದ ಚಿತ್ರದುರ್ಗದಲ್ಲಿ ಕನ್ನಡ ಪರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಸರ್ನಾಯಕ್ ಹೇಳಿದ್ದಾರೆ.

ಅವರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸದ ಹೊರತು ಬಸ್ ಸೇವೆಗಳನ್ನು ಪುನರಾರಂಭಿಸಲಾಗುವುದಿಲ್ಲ ಎಂದು ಸರ್ನಾಯಕ್ ಹೇಳಿದರು.

ನಿನ್ನೆ ರಾತ್ರಿ, ಚಿತ್ರದುರ್ಗದಲ್ಲಿ ಕರ್ತವ್ಯದಲ್ಲಿದ್ದಾಗ ಕೆಲವು ದುಷ್ಕರ್ಮಿಗಳು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ(MSRTC) ಚಾಲಕರನ್ನು ಥಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮತ್ತು ಉದ್ಯೋಗಿಗಳ ಸುರಕ್ಷತೆಗಾಗಿ ಕೊಲ್ಹಾಪುರದಿಂದ ಕರ್ನಾಟಕ ರಾಜ್ಯಕ್ಕೆ ಹೋಗುವ ಎಸ್‌ಟಿ ಬಸ್‌ಗಳನ್ನು ಅನಿರ್ದಿಷ್ಟಾವಧಿಗೆ ರದ್ದುಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರ ನಿರ್ದೇಶನದಂತೆ ಎಂಎಸ್‌ಆರ್‌ಟಿಸಿಯ ಸಿಪಿಆರ್‌ಒ ಅಭಿಜಿತ್ ಭೋಸಲೆ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಹೋಗುವ ಎಲ್ಲಾ ಬಸ್ ಸೇವೆಗಳನ್ನು ನಿಲ್ಲಿಸಲಾಗಿದೆ. ಪ್ರತಿದಿನ 50 ಕ್ಕೂ ಹೆಚ್ಚು ಸರ್ಕಾರಿ ಬಸ್‌ಗಳು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹೋಗುತ್ತವೆ. ಸರ್ಕಾರವು ಮಹಾರಾಷ್ಟ್ರದಿಂದ ಎಲ್ಲಾ ಸೇವೆಗಳನ್ನು ನಿಲ್ಲಿಸಿದೆ. ಕರ್ನಾಟಕದಿಂದ ಕೊಲ್ಹಾಪುರಕ್ಕೆ ಬರುವ ಕರ್ನಾಟಕ ಬಸ್‌ಗಳ ಸಂಚಾರವನ್ನು ಸಹ ನಿಷೇಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read