HomeIndiaSHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ...

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ.

ಚೈತ್ರ ನವರಾತ್ರಿ ಹಬ್ಬದ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದರು. ಅವರಲ್ಲಿ 80ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಓರ್ವ ಸಾವನ್ನಪ್ಪಿದ್ದಾರೆ.

6 ಜನರ ಸ್ಥಿತಿ ಗಂಭೀರವಾಗಿದ್ದು, ಚಂದ್ರಾಪುರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗುರುಫೆನ್ ಯದವ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಪ್ರಸಾದ ಸೇವನೆಯಿಂದ ಈ ಘಟನೆ ನಡೆದಿದ್ದು, ತನಿಖೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular