HomeCrimeಪತ್ನಿ ಗರ್ಭ ಧರಿಸಲು ಅಸಾಧ್ಯವೆಂದು ಹತ್ಯೆ ಮಾಡಿದ ಪಾಪಿ ಪತಿ

ಪತ್ನಿ ಗರ್ಭ ಧರಿಸಲು ಅಸಾಧ್ಯವೆಂದು ಹತ್ಯೆ ಮಾಡಿದ ಪಾಪಿ ಪತಿ

ಪತ್ನಿ ಗರ್ಭ ಧರಿಸಲು ಸಾಧ್ಯವಿಲ್ಲವೆಂದು ಪದೇ ಪದೇ ಜಗಳವಾಡುತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಅಂಬರ್‌ನಾಥ್ ಪ್ರದೇಶದ ಆರ್ಡನೆನ್ಸ್ ಫ್ಯಾಕ್ಟರಿ ಕಾಲೋನಿಯಲ್ಲಿರುವ ದಂಪತಿಗಳ ನಿವಾಸದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, 37 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ . ಬಂಧಿತ ಆರೋಪಿ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆ ಗರ್ಭಿಣಿಯಾಗದ ಕಾರಣ ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು . ಭಾನುವಾರ ಮತ್ತೆ ಇಬ್ಬರ ನಡುವೆ ಜಗಳ ನಡೆದಿದ್ದು, ಆರೋಪಿ ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮಹಿಳೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಯ ನೌಕರರ ಸಂಘದ ಪ್ರತಿನಿಧಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಭಾನುವಾರ ರಾತ್ರಿ ವ್ಯಕ್ತಿಯನ್ನು ಬಂಧಿಸಲಾಗಿದ್ದು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular