HomeLatest NewsBIG NEWS: ಮಹಾರಾಷ್ಟ್ರ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

BIG NEWS: ಮಹಾರಾಷ್ಟ್ರ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ಮೊದಲ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೆಲ ದಿನಗಳ ಹಿಂದೆ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಅವರ ನಿಧನದಿಂದ ತೆರವಾಗಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹುದ್ದೆಗೆ ಪತ್ನಿ ಸುನೇತ್ರಾ ಪವಾರ್ ಹೆಸರು ಕೇಳಿಬಂದಿತ್ತು. ಇಂದು ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಪಕ್ಷದ ನಾಯಕಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

ಬಳಿಕ ಲೋಕಭವನದಲ್ಲಿ ನಡೆದ ಸರಳ ಪದಗ್ರಹಣ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಹಾರಾಷ್ಟ್ರದ ಮೊದಲ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರಲ್ಲಿ ಎನ್ ಸಿಪಿಯಿಂದ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದ ಸುನೇತ್ರಾ ಪವಾರ್ ರನ್ನು 2024 ಜೂನ್ 18ರಂದು ರಾಜ್ಯಸಭೆಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಮಹಾರಾಷ್ಟ್ರ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular