HomeIndiaSHOCKING: ಚುನಾವಣೆಗಾಗಿ 6 ವರ್ಷದ ಮಗಳನ್ನೇ ಕಾಲುವೆಗೆ ಎಸೆದು ಕೊಂದ ತಂದೆ!

SHOCKING: ಚುನಾವಣೆಗಾಗಿ 6 ವರ್ಷದ ಮಗಳನ್ನೇ ಕಾಲುವೆಗೆ ಎಸೆದು ಕೊಂದ ತಂದೆ!

ಮುಂಬೈ: ಚುನಾವಣೆಗೆ ಸ್ಪರ್ಧಿಸಲೆಂದು ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನೇ ಕೊಲೆಗೈದಿರುವ ಅಮಾನುಷ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ವ್ಯಕ್ತಿ ತನ್ನ ೬ ವರ್ಷದ ಮಗಳನ್ನು ಕಾಲುವೆಗೆ ಎಸೆದು ಕೊಲೆಗೈದಿದ್ದಾನೆ. ಪ್ರಾಚಿ (6) ಕೊಲೆಯಾದ ಬಾಲಕಿ. ಪಾಂಡುರಂಗ ಕೊಂಡ್ಮಂಗಳೆ (28) ಮಗಳನ್ನೇ ಕೊಂದ ತಂದೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರು ಗ್ರಾಮದ ನಿವಾಸಿಯಾಗಿದ್ದ ಪಾಂಡುರಂಗ, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ದ. ಆದರೆ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿರಲಿಲ್ಲ. ಹಾಗಾಗಿ ಒಂದು ಮಗುವನ್ನು ಕೊಲೆ ಮಾಡಿದ್ದಾನಂತೆ ಮಹಾಶಯ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ಸಂಬಂಧ ಆರೋಪಿ ತಂದೆ ಪಾಂಡುರಂಗ ಹಾಗೂ ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆ ಎಂಬುವವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಕಮಿಷನರ್ ಪಿ.ಸಾಯಿ ಚೈತನ್ಯ, ಕೆಲ ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ್ ಸಾಗರ್ ಕಾಲುವೆಯಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯ ತಂದೆಯನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಗಳು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಹೇಳಿ ತನಿಖೆ ದಾರಿ ತಪ್ಪಿಸಲು ಯತ್ನಿಸಿದ್ದಾನೆ. ಆತನ ಮೇಲೆ ಅನುಮಾನಗೊಂದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೇ ಮಗಳನ್ನು ಕಾಲುವೆಗೆ ಎಸೆದು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಅವಕಶವಿಲ್ಲ ಎಂಬ ನಿಯಮವಿದೆ. ಈ ಹಿನ್ನೆಲೆಯಲ್ಲಿ ಪಾಂಡುರಂಗ ತನ್ನ ಮಗಳನ್ನೇ ಕೊಲೆಗೈದು ನಾಟಕವಾಡಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular