HomeKarnatakaಬೆಂಗಳೂರಿಗೆ ಬಂದ ಮಹಾರಾಷ್ಟ್ರ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆ ಕರೆ

ಬೆಂಗಳೂರಿಗೆ ಬಂದ ಮಹಾರಾಷ್ಟ್ರ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆ ಕರೆ

ಬೆಂಗಳೂರು: ಬೆಂಗಳೂನ ನೆಲಮಂಗಲದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪದ್ಯಾವಳಿಗೆ ಬಂದಿದ್ದ ಮಹಾರಾಷ್ಟ್ರದ ಆರ್ ಟಿ ಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬೆದರಿಕೆ ಕರೆ ಬಂದಿರುವ ಘಟನೆ ನಡೆದಿದೆ.

ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ ಪ್ರಸಾದ್ ಶಿವದಾಸ್ ನಾಲ್ವಡೆ ಕಳೆದ ವಾರ ಬೆಂಗಳೂರುಗೆ ಆಗಮಿಸಿ, ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 12ರಂದು ಗುಣಿ ಅಗ್ರಹಾರ ಪ್ರದೇಶದಲ್ಲಿದ್ದ ವೇಳೆ ಅವರಿಗೆ ಬೆದರಿಕೆ ಕರೆ ಬಂದಿದ್ದರಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರೆ ಮಾಡಿದವರ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಅಧಿಕಾರಿಗೆ ರವಿ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು, ಆಟೋ ಚಾಲಕರಿಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೀರಿ, ಇದರ ಪರಿಣಾಮ ನಿಮ್ಮ ಕುಟುಂಬದ ಮೇಲೆ ಬೀಳುತ್ತದೆ ಎಂದು ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ದಾಖಲೆ ಇಲ್ಲದ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular