HomeIndiaBREAKING: ಮದುವೆ ಸಮಾರಂಭದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ 6 ಮಂದಿ ದುರ್ಮರಣ

BREAKING: ಮದುವೆ ಸಮಾರಂಭದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ 6 ಮಂದಿ ದುರ್ಮರಣ

ನಾಗ್ಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಹೊರವಲಯದಲ್ಲಿ ನಡೆದಿದೆ.

ನಾಗ್ಪುರದ ಸೋನಖಾಂಬ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಟ್ರಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಜಯ್ ದಶರತ್ (45), ವಿಠಲ್ ದಿಂಗಂಬರ್ ತೋಟೆ (45), ಸುಧಾಕರ್ ರಾಮಚಂದ್ರ ಮಾನಕರ್(42), ರಮೇಶ್ ಓಂಕಾರ್(48), ಮಯೂರ್ ಮೂರೇಶ್ವರ್ ಇಂಗ್ಲೆ (26), ವೈಭವ್ (32) ಮೃತರು.

ಮದುವೆ ಸಮಾರಂಭ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ನಾಗ್ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular