HomeLatest NewsBIG NEWS: ಥಾಣೆಯ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ

BIG NEWS: ಥಾಣೆಯ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ

ಮುಂಬೈ: ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಥಾಣೆಯ ರುತು ಪಾರ್ಕ್ ನಲ್ಲಿರುವ ಎರಡು ಅಂತಸ್ತಿನ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 10:30ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಆರು ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಕ್ಷಣ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ಮೂಲಕ ಬೆಂಕಿ ನಿಯಂತ್ರಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೋಗಿಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular