ಗಡ್ಚಿರೋಲಿ: ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಮಹಾರಾಷ್ಟ್ರದ ಗಡ್ಚಿರೋಲಿ ಅರಣ್ಯ ಪ್ರದೇಶದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಲ್ಲಿನ್ ಐತಪಲ್ಲಿ ತಾಲೂಕಿನ ಗ್ರಾಮವೊಂದರ ಅರಣ್ಯದೊಳಗೆ ನಕ್ಸಲರ ಚಲನವಲನಗಳ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ, ಸಿ-60 ತಂಡ, ಸಿ ಆರ್ ಪಿಎಫ್ , ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಪ್ರವೇಶಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ. ಮೃತರಿಂದ ಎಕೆ-47 ಗನ್, ಪಿಸ್ತೂಲ್ ಗಳು, ಜೀವಮ್ತ ಗುಂಡುಗಳು, ನಕ್ಸಲ್ ಸಾಹಿತ್ಯಗಳು ಸೇರಿ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿವೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.