HomeIndiaBREAKING: ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರು ದುರ್ಮರಣ: ನಾಲ್ವರ ಸ್ಥಿತಿ ಗಂಭೀರ

BREAKING: ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರು ದುರ್ಮರಣ: ನಾಲ್ವರ ಸ್ಥಿತಿ ಗಂಭೀರ

ಪಾಲ್ಘಾರ್: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವಾಡಾ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಕೊನ್ಸಾಯಿ ಗ್ರಾಮದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಮಿಕಲ್ ಮಿಕ್ಸಿಂಗ್ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಸ್ಥಳದಲ್ಲೇ ಕಾರ್ಮಿಕರೊಬ್ಬರು ಸಾವನ್ನಪ್ಪಿದರೆ. ಮತ್ತೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಾಡಾ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular