HomeLatest Newsಅಮರಾವತಿ ಕೇಸ್ ಬೆನ್ನಲ್ಲೇ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ; ಕಾಮುಕನ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು...

ಅಮರಾವತಿ ಕೇಸ್ ಬೆನ್ನಲ್ಲೇ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ; ಕಾಮುಕನ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್: ಫಾರ್ಮಸಿ ವಿದ್ಯಾರ್ಥಿ ಅರೆಸ್ಟ್

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಯುವಕನಿಂದ 180ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಅಂತದ್ದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಫಾರ್ಮಸಿ ವಿದ್ಯಾರ್ಥಿಯೋರ್ವ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿರುವ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಹಿದ್ ಸಮೀರ್ (22) ಎಂಬ ಫಾರ್ಮಸಿ ವಿದ್ಯಾರ್ಥಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಹಲವು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅಶ್ಲೀಲವಾಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುವುದೇ ಈತನ ಕಾಯಕ. 20 ವರ್ಷದ ಯುವತಿಯೊಬ್ಬಳು ಏ.26 ರಂದು ಶಾಹಿದ್ ಸಮೀರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಬಗ್ಗೆ ದೂರು ದಾಖಲಿಸಿದ್ದಳು. ದೂರಿನ ಅನ್ವಯ ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ಆರೋಪಿಯನ್ನು ಸ್ಥಳೀಯ ನ್ಯಾಯಾಲಯಯ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಆರೋಪಿ ಶಾಹಿದ್ ಸಮೀರ್ ಸೋಷಿಯಲ್ ಮೀಡಿಯಾಗಳ ಮೂಲಕವಾಗಿ ಯುವತುಯರನ್ನು ಸಂಪರ್ಕಿಸಿ ಸ್ನೇಹ ಬೆಳೆಸುತ್ತಿದ್ದ ಬಳಿಕ ಕೊಲ್ಹಾಪುರ ಮತ್ತು ಶಿರೋಲಿಯ ಲಾಡ್ಜ್‌ಗಳಿಗೆ ಕರೆದೊಯ್ಯುತ್ತಿದ್ದ. ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿ, ರಹಸ್ಯವಾಗಿ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದ. ಈ ವಿಡಿಯೋಗಳನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ ಎನ್ನಲಾಗಿದೆ. ವಿಷಯ ಬಾಯ್ಬಿಟ್ಟರೆ ವಿಡಿಯೋ ವೈರಲ್ ಮಾಡುವುದಾಗಿ ಸಂತ್ರಸ್ತ ಯುವತಿಯರಿಗೆ ಬೆದರಿಕೆ ಹಾಕುತ್ತಿದ್ದ.

ಹಿಂದೂ ಸಂಘಟನೆಗಳ ಆರೋಪದ ಪ್ರಕಾರ, ಆರೋಪಿ 18 ರಿಂದ 22 ವರ್ಷ ವಯಸ್ಸಿನ ಸುಮಾರು 10 ಯುವತಿಯರನ್ನು ಇದೇ ರೀತಿ ಟಾರ್ಗೆಟ್ ಮಾಡಿ ಬಳಸಿಕೊಂಡಿದ್ದಾನೆ. ಇನ್ನೂ ಹಲವು ಸಂತ್ರಸ್ತೆಯರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಮ್ತೆ ಶಿವ ಪ್ರತಿಷ್ಠಾನ್ ಹಿಂದೂಸ್ತಾನ್ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮನವಿ ಮಾಡಿದೆ.

ಶಾಹಿದ್ ಸಮೀರ್ ನಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರು ಧೈರ್ಯವಾಗಿ ಮುಂದೆ ಬಂದು ದೂರು ದಾಖಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ದೂರು ನೀಡಿದವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular